ವಾಣಿಜ್ಯ ಗ್ಯಾಸ್ ದರ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ....

Correspondent/Political/Bengaluru/SM News Desk

May 3, 2026 - 20:38
 0  53
ವಾಣಿಜ್ಯ ಗ್ಯಾಸ್ ದರ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ....


ಬೆಂಗಳೂರು,ಮೇ 3 : ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಸಮರ್ಥ ಆಡಳಿತದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ , ರಾಜ ಉಪಾಧ್ಯಕ್ಷರಾದ ಚೈತ್ರ ವಿ ಗಿರೀಶ್, ದಿವ್ಯ ಆರ್ ಕೆ, ಶ್ರೀಧರ್, ರಾಹುಲ್, ಚೇತನ್ ನಾಯಕ್ , ರಾಮ್ ಅವರ ಹಾಗೂ ಇತರ ಪದಾಧಿಕಾರಿಗಳ ಸಾರಥ್ಯ ದಲ್ಲಿ ನಡೆದ ಈ ಹೋರಾಟದಲ್ಲಿ, ಚುನಾವಣೆ ಮುಗಿದ ಬೆನ್ನಲ್ಲೇ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಸಾಮಾನ್ಯ ಜನರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೊರೆ ಹೇರುತ್ತಿರುವ ಈ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.