ಅಗ್ರಿಗೋಲ್ಡ್ ಕಂಪನಿಯಿಂದ ವಂಚನೆಗೊಳಗಾದ ಸಂತ್ರಸ್ತರಿಂದ ಪೊಲೀಸ್ ಠಾಣೆಗೆ ದೂರುಗಳ ಮಹಾಪೂರ!

Correspondent/karnataka/Crime News/Bangalore

Nov 11, 2026 - 10:15
 0  17
ಅಗ್ರಿಗೋಲ್ಡ್ ಕಂಪನಿಯಿಂದ ವಂಚನೆಗೊಳಗಾದ ಸಂತ್ರಸ್ತರಿಂದ ಪೊಲೀಸ್ ಠಾಣೆಗೆ ದೂರುಗಳ ಮಹಾಪೂರ!

ಬೆಂಗಳೂರು, ನ.11 : ಅಗ್ರಿಗೋಲ್ಡ್ ಕಂಪನಿಯಿಂದ ವಂಚನೆಗೊಳಗಾದ ಸಂತ್ರಸ್ತರಿಂದ ಪೊಲೀಸ್ ಠಾಣೆಗೆ ದೂರುಗಳ ಮಹಾಪೂರ!

ಅಗ್ರಿಗೋಲ್ಡ್ ಕಂಪನಿಯ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ನೂರಾರು ಸಾರ್ವಜನಿಕರು ಇಂದು ತಮ್ಮ ಹಣವನ್ನು ಮರಳಿ ಪಡೆಯುವ ಉದ್ದೇಶದಿಂದ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳಿ ದೂರುಗಳನ್ನು ಸಲ್ಲಿಸುತ್ತಿದ್ದಾರೆ.ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಇಂದು ಕಂಡುಬಂದ ದೃಶ್ಯವೇ ಇದಕ್ಕೆ ಸಾಕ್ಷಿಯಾಗಿದೆ. ಸುಮಾರು 800ಕ್ಕೂ ಹೆಚ್ಚು ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು, ಅಗ್ರಿಗೋಲ್ಡ್ ಸಂಸ್ಥೆಯಿಂದ ತಮಗೆ ಆಗಿರುವ ವಂಚನೆಯ ಕುರಿತು ಪೊಲೀಸರಿಗೆ ದೂರು ಸಲ್ಲಿಸುತ್ತಿದ್ದು, ತಮ್ಮ ಹೂಡಿಕೆಯ ಹಣವನ್ನು ಮರಳಿ ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಸಂತ್ರಸ್ತರು ತಾವು ಹೂಡಿಕೆ ಮಾಡಿರುವ ಹಣಕ್ಕೆ ಸಂಬಂಧಿಸಿದ ದಾಖಲೆಗಳು, ರಸೀದಿಗಳು ಹಾಗೂ ಅಗತ್ಯ ಪುರಾವೆಗಳನ್ನು ಪೊಲೀಸರಿಗೆ ಸಲ್ಲಿಸಿ ದೂರುಗಳನ್ನು ದಾಖಲಿಸುತ್ತಿದ್ದಾರೆ.ಸಾಮಾನ್ಯ ಜನರ ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಂಡಿರುವ ಸಂತ್ರಸ್ತರು ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವಂಚನೆಗೊಳಗಾದ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವುದರ ಜೊತೆಗೆ ಅವರ ಹಣವನ್ನು ಮರಳಿ ಕೊಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.