ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾಗಿ 8 ತಿಂಗಳಾದರೂ ನಡೆದಿಲ್ಲ ಒಂದೇ ಒಂದು ಸಭೆ
Correspondent/GBA/Bengaluru/SM News Desk
ಬೆಂಗಳೂರು, ಮೇ. 20 : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾಗಿ ಸುಮಾರು 8 ತಿಂಗಳು ಕಳೆದಿದ್ದರೂ, ಪ್ರಾಧಿಕಾರದ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇದುವರೆಗೆ ಕೇವಲ ಒಂದೇ ಒಂದು ಸಭೆ ಮಾಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ಜಿಬಿಎ ರಚನೆಯ ನಂತರ ಮೊದಲ ಬಾರಿಗೆ ಕಳೆದ ಸೆ.10ರಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿತ್ತು. ಆದರೆ ಅದರ ನಂತರದಿಂದ ಇಂದಿನವರೆಗೆ ಮತ್ತೊಂದು ಸಭೆ ನಡೆದಿಲ್ಲ. ಸುಮಾರು ಏಳು ತಿಂಗಳು ಕಳೆದರೂ ಸಭೆ ಕರೆದಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ನಡುವೆ ಸಭೆ ನಡೆಸುವಂತೆ ಜಿಬಿಎ ಅಧಿಕಾರಿಗಳು ಎರಡು ಬಾರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರೂ, ಸಭೆಗೆ ಸಮಯ ನಿಗದಿಯಾಗಿಲ್ಲ ಎನ್ನಲಾಗಿದೆ.ಜಿಬಿಎ ಕಾಯ್ದೆ ಪ್ರಕಾರ ಪ್ರತಿ ಮೂರು ತಿಂಗಳಿಗೊಮ್ಮೆ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಬೇಕು.ಸಭೆಯಲ್ಲಿ ಬೆಂಗಳೂರಿನ ಎಲ್ಲಾ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿ ನಗರಾಭಿವೃದ್ಧಿ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕಿದೆ.
