ಜೆಪಿ ಭವನದಲ್ಲಿ ಶ್ರೀ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ
Correspondent/karnataka/Political/SM News Desk
ಬೆಂಗಳೂರು,ಮೇ1: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಶ್ರೀ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀಮತಿ ಲೀಲಾದೇವಿ ಆರ್ ಪ್ರಸಾದ್ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಟಿ.ಎನ್. ಜವರಾಯಿಗೌಡ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಎ. ತಿಪ್ಪೇಸ್ವಾಮಿ ಅವರು, ಬೆಂಗಳೂರು ಪಶ್ಚಿಮ ನ ಗರ ಜಿಲ್ಲಾಧ್ಯಕ್ಷರಾದ ಮಾನ್ಯ ಶ್ರೀ ಟಿ. ತಿಮ್ಮೇಗೌಡ ರವರು ಹಾಗೂ ಬೆಂಗಳೂರು ನಗರದ ಜಿಲ್ಲಾಧ್ಯಕ್ಷರುಗಳು ಹಾಗೂ ಬೆಂಗಳೂರಿನ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ವಿವಿಧ ಮುಖಂಡರು, ಮಹಿಳಾ ಮುಖಂಡರು, ಕಾರ್ಮಿಕ ಮುಖಂಡರು, ವಿಭಾಗಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಪಕ್ಷದ 25 ವರ್ಷದ ಬೆಳ್ಳಿ ಹಬ್ಬ(ರಜತ ಮಹೋತ್ಸವ) ಪೂರೈಸಿರುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ 25 ಕಾರ್ಮಿಕರಿಗೆ ಹೆಚ್.ಡಿ.ಕೆ “ಕಾರ್ಮಿಕ ರತ್ನ” ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
