ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ಸಂಕಲ್ಪ : ಗೃಹ ಸಚಿವ ಪರಮೇಶ್ವರ್
Correspondent/Bengaluru/SM News Desk
ಬೆಂಗಳೂರು, ಮಾ.1 : ಜನ ಜಾಗೃತಿಗಾಗಿ ವಾಕಥಾನ್: ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸೈಬರ್ ಕ್ರೈಂ ಕುರಿತ ತಿಳಿವಳಿಕೆಗಳಿಗೆ ಜನರಲ್ಲಿ ಅರಿವು ಮೂಡಿಸಲು ಕಳೆದ ಮೂರು ವರ್ಷಗಳಿಂದಲೂ ರಾಜ್ಯದಲ್ಲಿ ವಾಕಥಾನ್ ನಡೆಸಲಾಗುತ್ತಿದೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ರಾಜ್ಯವನ್ನು ಮಾದಕ ವಸ್ತುಗಳ ವ್ಯಸನ ಮುಕ್ತಗೊಳಿಸುವ ಸಂಕಲ್ಪ ಹೊಂದಿದೆ. ಇದಕ್ಕಾಗಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವಾಕಥಾನ್ ಅನ್ನು ಆಯೋಜಿಸುತ್ತಿದೆ ಎಂದರು.
ಮಾದಕ ವಸ್ತುಗಳ ಹಾವಳಿಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಅದನ್ನು ಮಟ್ಟ ಹಾಕಲು ನಿರಂತರ ಪ್ರಯತ್ನ ನಡೆಯುತ್ತಿದೆ. ಒಂದಲ್ಲಾ ಒಂದು ದಿನ ನಾವು ಗುರಿ ತಲುಪುತ್ತೇವೆ ಎಂದರು.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ನಮ ಪೊಲೀಸ್ ನಮ ಹೆಮೆ ಘೋಷವಾಕ್ಯದಡಿ ಆಯೋಜಿಸಿದ್ದ 3ನೇ ವರ್ಷದ ಪೊಲೀಸ್ ಓಟ (ಕರ್ನಾಟಕ ಪೊಲೀಸ್ ರನ್) ಸ್ಪರ್ಧೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಚಾಲನೆ ನೀಡಿದರು.
ಡ್ರಗ್‌್ಸ ಮುಕ್ತ ಕರ್ನಾಟಕ, ಸೈಬರ್ ಅಪರಾಧ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ 10 ಕಿ.ಮೀ. ಹಾಗೂ 5 ಕಿ.ಮೀ. ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
