ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಪ್ರವಾಸಕ್ಕೆ ತೆರಳಿ, ದುಬೈನಲ್ಲಿ ಸಿಲುಕಿದ 150 ವಿದ್ಯಾರ್ಥಿಗಳು

Correspondent/Krishnappa/Chikkaballapura/SM News Desk

Mar 1, 2026 - 22:44
Mar 1, 2026 - 22:48
 0  16
ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಪ್ರವಾಸಕ್ಕೆ ತೆರಳಿ, ದುಬೈನಲ್ಲಿ ಸಿಲುಕಿದ 150 ವಿದ್ಯಾರ್ಥಿಗಳು

ಬೆಂಗಳೂರು, ಮಾ.1 : ಇರಾನ್‌-ಇಸ್ರೇಲ್‌ ಸಂಘರ್ಷದಿಂದ ದುಬೈನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಪೊಲೀಸ್‌‍ ಇಲಾಖೆಯಿಂದ ಆಯೋಜಿಲಾಗಿದ ವಾಕಥಾನ್‌ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಪೂರ್ಣಪ್ರಮಾಣದ ಮಾಹಿತಿಗಳು ನಮಗಿನ್ನೂ ಬರಬೇಕಿದೆ. ಈವರೆಗಿನ ಮಾಹಿತಿಯ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಪ್ರವಾಸಕ್ಕೆ ತೆರಳಿದ್ದ, 150 ವಿದ್ಯಾರ್ಥಿಗಳು ದುಬೈನಲ್ಲಿ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಪ್ರಯತ್ನಗಳನ್ನು ನಮ ಸರ್ಕಾರ ನಡೆಸಿದೆ ಎಂದರು.ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೂ ಸಂಪರ್ಕ ಸಾಧಿಸಲಾಗಿದೆ. ಪೊಲೀಸ್‌‍ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಸಹಕಾರ ನೀಡುತ್ತಿರುವುದಾಗಿ ತಿಳಿಸಿದರು.